Monday 4 September 2017

ಕ್ರೀಡಾ ಸಚಿವರಾಗಿ ಆಯ್ಕೆಯಾದ ಮೊದಲ ಕ್ರೀಡಾಪಟು



ಹಲಿ : 2004ರ ಅಥೆನ್ಸ್‌ ಒಲಿಂಪಿಕ್ಸ್‌ನಲ್ಲಿ ಶೂಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ರಾಜವರ್ಧನ್ ಸಿಂಗ್ ರಾಥೋರ್‌ ನೂತನ ಕ್ರೀಡಾ ಸಚಿವರಾಗಿ ನೇಮಕವಾಗುವ ಮೂಲಕ ಕ್ರೀಡಾ ಸಚಿವರಾದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.


ಕೇಂದ್ರ ಸರ್ಕಾರದಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವರಾಗಿದ್ದ ರಾಜವರ್ಧನ್ ಸಿಂಗ್ ರಾಥೋರ್‌, ನೂತನ ಸಂಪುಟ ವಿಸ್ತರಣೆಯಲ್ಲಿ ಕ್ರೀಡಾ ಸಚಿವರಾಗಿ ಆಯ್ಕೆಯಾಗುವ ಮೂಲಕ, ಕ್ರೀಡಾ ಸಚಿವರಾದ ದೇಶದ ಮೊದಲ ಕ್ರೀಡಾಪಟು ಎಂಬ ಖ್ಯಾತಿಗೆ ಭಾಜನರಾದರು. ಈ ಮೊದಲು ವಿಜಯ್‌ ಗೋಯಲ್‌ ಕ್ರೀಡಾ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಥೋರ್‌ ನಿವೃತ್ತಿ ಪಡೆದ ನಂತರ 2013ರ ಲೋಕಸಭೆ ಚುನಾವಣೆಯಲ್ಲಿ ಜೈಪುರ ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ನಂತರ ನರೇಂದ್ರ ಮೋದಿ ಸಂಪುಟದಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವರಾಗಿದ್ದರು. ಪ್ರಸ್ತುತ ಕ್ರೀಡಾ ಸಚಿವರಾಗಿದ್ದು ಮುಂದಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ವಾತಾವರಣ ನಿರ್ಮಿಸಲು ಸಹಾಯಕವಾಗಿದೆ.

ಪ್ರಧಾನ ಮಂತ್ರಿಗಳು ನನ್ನ ಮೇಲೆ ವಿಶ್ವಾಸವಿಟ್ಟು ಮಹತ್ವದ ಸಚಿವ ಸ್ಥಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕ್ರೀಡಾಪಟುಗಳು ಎದುರಿಸುವ ಎಲ್ಲಾ ತೊಂದರೆಗಳನ್ನು ನಿವಾರಿಸಿ, ಅವರಿಗೆ ಉತ್ತಮ ವಾತಾವರಣ ನಿರ್ಮಿಸಿ ಕೊಡಲು ಶ್ರಮ ವಹಿಸುತ್ತೇನೆ ಎಂದು ತಿಳಿಸಿದ್ದಾರೆ. 

No comments:

Post a Comment